ಬೆಂಗಳೂರು: ಬೆಂಗಳೂರಿನಲ್ಲಿ ಲಾಕ್ಡೌನ್ ಮಾರ್ಗಸೂಚಿ ಬದಲಾವಣೆ ಹಿನ್ನೆಲೆಯಲ್ಲಿ ನಮ್ಮ ಪೊಲೀಸರ ಕಾರ್ಯವೈಖರಿ ಬದಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರು ನಗರಕ್ಕೆ 2000 ಹೋಮ್ ಗಾರ್ಡ್ಸ್ ಗಳ ಅಗತ್ಯವಿದೆ. ಅವರನ್ನು ಶೀಘ್ರದಲ್ಲೇ ನೇಮಕ ಮಾಡಿಕೊಳ್ಳಲಾಗುವುದು. 100 ಆಂಬುಲೆನ್ಸ್ ಗಳು ಸಿದ್ಧವಾಗಿವೆ ಎಂದು ಹೇಳಿದ್ದಾರೆ.
ಫೋರ್ಸ್ ಬಳಕೆ ಮಾಡುವ ಅನಿವಾರ್ಯತೆ ಬರದಂತೆ ಸಾರ್ವಜನಿಕರು ಲಾಕ್ಡೌನ್ ನಿಯಮಗಳನ್ನು ಪಾಲಿಸಬೇಕು. ಕೊರೋನಾ ತಡೆಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಮಧ್ಯಾಹ್ನ 12 ಗಂಟೆಯವರೆಗೂ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದ್ದು, ಆ ಸಮಯದೊಳಗೆ ಜನ ಅಗತ್ಯ ವಸ್ತು ಖರೀದಿಸಿ ಉಳಿದ ಅವಧಿಯಲ್ಲಿ ಮನೆಯಲ್ಲೇ ಇರಬೇಕು ಎಂದು ತಿಳಿಸಿದ್ದಾರೆ.