ಬೆಂಗಳೂರು: ಕೊರೊನಾ ಸೋಂಕಿತ ಪ್ರಕರಣಗಳು ತೀವ್ರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಭಾನುವಾರ ಲಾಕ್ಡೌನ್ ಘೋಷಿಸಿರುವ ಸರ್ಕಾರ ಮತ್ತೆ 12 ದಿನ ಸಂಪೂರ್ಣ ಲಾಕ್ಡೌನ್ ಜಾರಿಗೆ ಚಿಂತನೆ ನಡೆಸಿದೆ ಎನ್ನಲಾಗಿದೆ.
ಎಸ್ಎಸ್ಎಲ್ಸಿ ಪರೀಕ್ಷೆ ಮುಗಿಯುತ್ತಿದ್ದಂತೆ ಕಠಿಣ ಲಾಕ್ ಡೌನ್ ಜಾರಿ ಮಾಡುವ ಸಾಧ್ಯಾಸಾಧ್ಯತೆಗಳ ಕುರಿತಾಗಿ ಚರ್ಚಿಸಿದ್ದು, ಸಿಎಂ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ಆದರೆ, ಟಾಸ್ಕ್ ಫೋರ್ಸ್ ಸಭೆಯಲ್ಲಿ ಲಾಕ್ಡೌನ್ ಬಗ್ಗೆ ಚರ್ಚೆಯಾಗಿಲ್ಲ ಎನ್ನಲಾಗಿದೆ.
ಗೃಹ ಸಚಿವ ಬಸವರಾಜ ಬೊಮ್ಮಾಯಿ ವಿಧಾನಸೌಧದಲ್ಲಿ ಮಾತನಾಡಿ, ರಾಜ್ಯದಲ್ಲಿ ಮತ್ತೊಮ್ಮೆ ಕಂಪ್ಲೀಟ್ ಲಾಕ್ಡೌನ್ ಮಾಡುವುದಿಲ್ಲ. ಟಾಸ್ಕ್ ಫೋರ್ಸ್ ಸಭೆಯಲ್ಲಿ ಲಾಕ್ಡೌನ್ ಬಗ್ಗೆ ಚರ್ಚೆಯಾಗಿಲ್ಲ. ಟಾಸ್ಕ್ ಫೋರ್ಸ್ ಸಭೆಯಲ್ಲಿ ಲಾಕ್ಡೌನ್ ಅಜೆಂಡಾ ಇರಲಿಲ್ಲ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಸೋಂಕಿತರ ಚಿಕಿತ್ಸೆಯ ಬಗ್ಗೆ ಚರ್ಚೆ ನಡೆಸಲಾಗಿದೆ. ಸೋಂಕಿತರಿಗೆ ವ್ಯವಸ್ಥಿತವಾಗಿ ಚಿಕಿತ್ಸೆ ಕೊಡಿಸುವ ಬಗ್ಗೆ ಚರ್ಚಿಸಲಾಗಿದ್ದು, ಮತ್ತಷ್ಟು ಕ್ರಮ ಕೈಗೊಳ್ಳಲಾಗುವುದು. ನೆಗೆಟಿವ್ ವರದಿ ಬಂದವರನ್ನು ಬಿಡುಗಡೆ ಮಾಡಲಾಗುವುದು. ಸೋಂಕು ತಡೆಗೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.