ಕೊರೊನಾ ಸೋಂಕು ಸಂಪೂರ್ಣ ನಿಯಂತ್ರಣಕ್ಕೆ ಬರುವವರೆಗೆ ಶಾಲೆಗಳನ್ನು ತೆರೆಯಬಾರದು ಎಂದು ಮಾಜಿ ಶಿಕ್ಷಣ ಸಚಿವ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಇಂತಹ ಸಂದರ್ಭದಲ್ಲಿ ಶಾಲೆಗಳನ್ನು ತೆರೆಯಬಾರದು. ಕೊರೋನಾ ಸಂಪೂರ್ಣ ನಿಯಂತ್ರಣಕ್ಕೆ ಬಂದ ನಂತರ ಶಾಲೆಗಳನ್ನು ಆರಂಭಿಸಬೇಕು ಎಂದು ಹೇಳಿದ್ದಾರೆ.
ಅನಗತ್ಯ ರಜೆಗಳನ್ನು ರದ್ದುಪಡಿಸಿ ಶನಿವಾರ ಪೂರ್ಣ ತರಗತಿ ನಡೆಸಬೇಕು. ಅಗತ್ಯವಿದ್ದ ಸಂದರ್ಭದಲ್ಲಿ ಮಾತ್ರ ಒಂದು ಶನಿವಾರ ರಜೆ ನೀಡಬೇಕು. ಶಾಲಾ ಸಮಯವನ್ನು ಅರ್ಧಗಂಟೆ ಹೆಚ್ಚಳ ಮಾಡಬೇಕು. ದಸರಾ ರಜೆ ಮತ್ತು ವಿವಿಧ ಜಯಂತಿಗಳ ರಜೆಯನ್ನು ರದ್ದು ಮಾಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
ಆನ್ಲೈನ್ ತರಗತಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಅಪಾಯಕಾರಿಯಾಗಿದೆ. ಒಂದರಿಂದ ಪಿಯುಸಿವರೆಗೆ ಆನ್ಲೈನ್ ಶಿಕ್ಷಣ ಸಾಧ್ಯವಿಲ್ಲ. ಹಾಗಾಗಿ, ಕೊರೋನಾ ನಿಯಂತ್ರಣಕ್ಕೆ ಬಂದ ನಂತರ ಅನಗತ್ಯ ರಜೆ ರದ್ದುಮಾಡಿ ಶಾಲೆ-ಕಾಲೇಜುಗಳನ್ನು ನಡೆಸಬಹುದು ಎಂದು ಹೇಳಿದ್ದಾರೆ.