
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯದ ರೈತರ ಖಾತೆಗೆ ಹಣ ಜಮಾ ಮಾಡಲಾಗಿದೆ. 1 ಸಾವಿರ ಕೋಟಿ ರೂಪಾಯಿಯನ್ನು 50 ಲಕ್ಷ ರೈತರಿಗೆ ಬಿಡುಗಡೆ ಮಾಡಲಾಗಿದ್ದು ಶನಿವಾರದಿಂದ ರೈತರ ಖಾತೆಗೆ ನೇರವಾಗಿ ಹಣ ಜಮೆಯಾಗುತ್ತಿದೆ.
ನಿನ್ನೆ ಫೇಸ್ ಬುಕ್ ಲೈವ್ ನಲ್ಲಿ ಈ ಕುರಿತು ಮಾತನಾಡಿದ ಕೃಷಿ ಸಚಿವ ಬಿ.ಸಿ. ಪಾಟೀಲ್. ರೈತರ ಖಾತೆಗೆ ಶನಿವಾರದಿಂದ ಹಣ ಜಮಾ ಮಾಡುತ್ತಿದ್ದು, ರೈತರು ತಮ್ಮ ಖಾತೆಯನ್ನು ಪರಿಶೀಲಿಸಬೇಕು ಎಂದು ಹೇಳಿದ್ದಾರೆ.
2019 -20 ನೇ ಸಾಲಿನ ಬೆಳೆಯನ್ನು ಮಂಗಳವಾರದಿಂದ ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.