ಐಸಿಎಆರ್(ಭಾರತೀಯ ಕೃಷಿ ಸಂಶೋಧನಾ ಮಂಡಳಿ) ನಿಯಮದಂತೆ ರಾಜ್ಯದಲ್ಲಿ ಕೃಷಿ ಪದವಿಯ ದಾಖಲಾತಿಗೆ ನಡೆಸಲಾಗುವ ಪ್ರಾಯೋಗಿಕ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.
ಕೃಷಿಕರ ಕೋಟಾದ ಅಡಿಯಲ್ಲಿ ಶೇಕಡ 40 ರಷ್ಟು ಸೀಟುಗಳು ಕೃಷಿಕರ ಮಕ್ಕಳಿಗೆ ಮೀಸಲಿಡುವುದರಿಂದ ಪರೀಕ್ಷೆಯನ್ನು ರದ್ದು ಮಾಡಿರುವುದರಿಂದ ಕೃಷಿಕರ ಮಕ್ಕಳಿಗೆ ಯಾವುದೇ ರೀತಿಯ ಅನ್ಯಾಯ ಉಂಟುಮಾಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ.
ನೈಜ ಕೃಷಿಕರ ಮಕ್ಕಳು ಮಾತ್ರ ಕೃಷಿಕರ ಕೋಟಾದಲ್ಲಿ ಸೀಟುಗಳನ್ನು ಪಡೆದುಕೊಳ್ಳುವಂತೆ ಮಾಡಲು ಸರ್ವ ನಿಬಂಧನೆಗಳನ್ನು ಸಿದ್ದಪಡಿಸಲಾಗಿದೆ ಎಂದು ಹೇಳಿದ್ದಾರೆ.
ಕೊರೋನಾ ಪರಿಸ್ಥಿತಿಯಲ್ಲಿ ಸರ್ಕಾರ ರೈತರ ಆರೋಗ್ಯ ಹಾಗೂ ಹಿತರಕ್ಷಣೆಗೆ ಹೆಚ್ಚಿನ ಮಹತ್ವ ನೀಡಿದೆ. 15 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರಾಯೋಗಿಕ ಪರೀಕ್ಷೆಗಳಿಗೆ ಸ್ವತಃ ಹಾಜರಾಗಬೇಕಾಗುತ್ತದೆ. ಈ ಸಂದರ್ಭದಲ್ಲಿ ಸರ್ಕಾರದ ನಿರ್ದೇಶನದಂತೆ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ನಡೆಸುವುದು ಕಷ್ಟಸಾಧ್ಯವೆಂದು ಹೇಳಿದ್ದಾರೆ.