alex Certify ರಾಜ್ಯದಲ್ಲಿ ಕೃಷಿ ಉತ್ಪಾದನೆ ಹೆಚ್ಚಳಕ್ಕೆ ಸೌರಶಕ್ತಿ: ರೈತ ಸಮುದಾಯಕ್ಕೆ ‌ʼಗುಡ್ ನ್ಯೂಸ್ʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಕೃಷಿ ಉತ್ಪಾದನೆ ಹೆಚ್ಚಳಕ್ಕೆ ಸೌರಶಕ್ತಿ: ರೈತ ಸಮುದಾಯಕ್ಕೆ ‌ʼಗುಡ್ ನ್ಯೂಸ್ʼ

ನವದೆಹಲಿ: ಕೃಷಿ ಸಚಿವ ಬಿ.ಸಿ.ಪಾಟೀಲ್ ದೆಹಲಿಯಲ್ಲಿಂದು ಕೇಂದ್ರ ಇಂಧನ ಖಾತೆ ಸಚಿವ ಆರ್.ಕೆ. ಸಿಂಗ್ ಅವರನ್ನು ಭೇಟಿ ಮಾಡಿ ಸೌರಶಕ್ತಿ ಬಲವರ್ಧನೆ ಸಂಬಂಧ ಚರ್ಚಿಸಿ ರಾಜ್ಯಕ್ಕೆ ಸೌರಶಕ್ತಿಗಾಗಿ ಹೆಚ್ಚುವರಿ 10 ಬ್ಲಾಕ್‌ಗಳನ್ನು ನೀಡುವಂತೆ ಮನವಿ ಸಲ್ಲಿಸಿದರು.

ಭಾರತ ಸೌರಶಕ್ತಿ ಬಳಕೆಗೆ ಹೆಚ್ಚು ಸೂಕ್ತವಾದ ಭೂಪ್ರದೇಶ ಹೊಂದಿರುವುದರಿಂದ ಕೃಷಿಯಲ್ಲಿ ಸೌರಶಕ್ತಿಯನ್ನು ಬಳಸಿ ಉತ್ಪಾದನೆಯನ್ನು ಹೆಚ್ಚಿಸುವುದು ಅತ್ಯವಶ್ಯಕವಾಗಿದೆ. ಕರ್ನಾಟಕ ರಾಜ್ಯದಲ್ಲಿ ಕೃಷಿಯಲ್ಲಿ ಸೌರಶಕ್ತಿ ಮೂಲಕ ನೀರಾವರಿ ಬಳಸುವುದರಿಂದ ಹೆಚ್ಚು ಉತ್ಪಾದನೆ ಮಾಡಬಹುದಾಗಿದೆ. ಹೀಗಾಗಿ ಕರ್ನಾಟಕದಲ್ಲಿ ಕೇಂದ್ರ ಸರ್ಕಾರ ಸೌರಶಕ್ತಿ ಯೋಜನೆ ಬಲವರ್ಧನೆಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಸಿ.ಪಾಟೀಲ್, ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದೇನೆ‌. ರಾಜ್ಯದಲ್ಲಿ ಯಾವುದೇ ರೀತಿಯಲ್ಲಿ ಯೂರಿಯಾ ಗೊಬ್ಬರ ಕೊರತೆಯಾಗದಂತೆ  ಕೇಂದ್ರ ರಸಾಯನಿಕ ಗೊಬ್ಬರ ಸಚಿವ ಡಿ.ವಿ. ಸದಾನಂದಗೌಡ ಅವರನ್ನು ಭೇಟಿ ಮಾಡಿ ಚರ್ಚಿಸಲಾಗಿದೆ ಎಂದು ತಿಳಿಸಿದ್ದಾರೆ‌.

ಅಂತೆಯೇ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರನ್ನು ಭೇಟಿ ನಡೆಸಿ ಅಂಕೋಲಾ – ಹುಬ್ಬಳ್ಳಿ ರೈಲ್ವೆ ಯೋಜನೆ ಬಗ್ಗೆ ಚರ್ಚಿಸಲಾಗಿದೆ‌. ಹುಬ್ಬಳ್ಳಿ ಅಂಕೋಲಾ ರೈಲ್ವೆ ಯೋಜನೆ ಬಗ್ಗೆ ಪ್ರಕಾಶ್ ಜಾವಡೇಕರ್ ಪೂರಕವಾಗಿ ಸ್ಪಂದಿಸಿದ್ದಾರೆ. ಕೇಂದ್ರ ಸಚಿವರ ಪ್ರಹ್ಲಾದ್ ಜೋಶಿ ಅವರ ಮುಂದೆಯೂ ಇಲಾಖೆ ಪರವಾಗಿ ಹಲವು ಬೇಡಿಕೆಗಳನ್ನು ಇಡಲಾಗಿದೆ‌. ಕೇಂದ್ರ ಇಂಧನ ಸಚಿವ ಆರ್.ಕೆ ಸಿಂಗ್ ಭೇಟಿ ಮಾಡಿ ಸೋಲಾರ್ ಬ್ಲಾಕ್ ನೀಡುವ ಬಗ್ಗೆ ಮನವಿ ಮಾಡಿರುವುದಾಗಿ ಹೇಳಿದ್ದಾರೆ.

ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಗಮನಕ್ಕೆ ರೈತ ಬೆಳೆ ಸಮೀಕ್ಷೆ ಆ್ಯಪ್ ಯಶಸ್ವಿಯಾಗುತ್ತಿರುವ ಬಗ್ಗೆ ಹಾಗೂ ಆ್ಯಪ್ ಸಮೀಕ್ಷೆಯಿಂದಾಗುತ್ತಿರುವ ಅನುಕೂಲದ ಬಗ್ಗೆ ವಿವರಿಸಲಾಗಿದೆ‌. ಅಲ್ಲದೇ ರಾಜ್ಯದ ಕೃಷಿ ಮತ್ತು ರೈತರ ಅಭಿವೃದ್ಧಿಗಾಗಿ ಹಲವು ಯೋಜನೆಗಳಿಗೆ ಅನುದಾನಕ್ಕೆ ಮನವಿ ಮಾಡಿರುವುದಾಗಿ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ವಿರೋಧಿಸಿ ನಡೆದ ದಾಂಧಲೆ ವಿಚಾರವಾಗಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್, ಸಂಗೊಳ್ಳಿ ರಾಯಣ್ಣ ಮತ್ತು ಶಿವಾಜಿ ಮಹಾರಾಜ್ ಇಬ್ಬರು ದೇಶಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ್ದಾರೆ. ಇಂತಹ ಹೋರಾಟಗಾರರ ವ್ಯಕ್ತಿತ್ವಕ್ಕೆ ಧಕ್ಕೆ ತರುವಂತಹ ಪ್ರಯತ್ನಗಳನ್ನು ಕೆಲವು ಕಿಡಿಗೇಡಿಗಳು ಮಾಡುತ್ತಿರುವುದು ದುರಾಷ್ಟಕರ ಬೆಳವಣಿಗೆ..ತಪ್ಪಿತಸ್ಥರು ಯಾರೇ ಆಗಿರಲಿ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...