
ಕಾರವಾರ: ಉತ್ತರ ಕನ್ನಡ ಜಿಲ್ಲೆ ಗೋಕರ್ಣದ ಕಡಲ ತೀರದಲ್ಲಿ ಪತ್ನಿಯ ಕಣ್ಣೆದುರಲ್ಲೇ ಪತಿ ಪ್ರಾಣ ಕಳೆದುಕೊಂಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕಿನ ಅವರ್ಸಾ ನಿವಾಸಿ ಅರವಿಂದ ಶೆಣೈ(45) ಮೃತಪಟ್ಟವರು ಎಂದು ಹೇಳಲಾಗಿದೆ. ಪತ್ನಿಯೊಂದಿಗೆ ಗೋಕರ್ಣಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಬೀಚ್ ಗೆ ಆಗಮಿಸಿದ್ದಾರೆ.
ಸಮುದ್ರಕ್ಕೆ ಇಳಿದು ಅರವಿಂದ ಅವರು ಈಜಾಡುವಾಗ ಅಲೆಗಳ ಸೆಳೆತಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆನ್ನಲಾಗಿದೆ. ಸ್ಥಳೀಯರು ಹಾಗೂ ಪೊಲೀಸರು ಆಂಬುಲೆನ್ಸ್ ನಲ್ಲಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಕಣ್ಣೆದುರಲ್ಲೇ ನಡೆದ ಘಟನೆಯಿಂದ ಅರವಿಂದ ಶೆಣೈ ಅವರ ಪತ್ನಿಯ ಆಕ್ರಂದನ ಮುಗಿಲು ಮುಟ್ಟಿದೆ.