alex Certify ರಸ್ತೆಯಲ್ಲೇ ಯುವತಿ ಗುಪ್ತಾಂಗ ಮುಟ್ಟಿ ಲೈಂಗಿಕ ಕಿರುಕುಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಸ್ತೆಯಲ್ಲೇ ಯುವತಿ ಗುಪ್ತಾಂಗ ಮುಟ್ಟಿ ಲೈಂಗಿಕ ಕಿರುಕುಳ

ಬೆಂಗಳೂರು: ತರಕಾರಿ ತರಲು ಹೋದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಸ್ಥಳೀಯರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಕಾಟನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 20 ವರ್ಷದ ವಿದ್ಯಾರ್ಥಿನಿ ಏಪ್ರಿಲ್ 25ರಂದು ತರಕಾರಿ ತರಲು ಓಬಯ್ಯ ಲೇನ್ 1 ನೇ ಕ್ರಾಸ್ ಕಿರಿದಾದ ರಸ್ತೆಯಲ್ಲಿ ಹೋಗುವಾಗ 21 ವರ್ಷದ ಮಹಮದ್ ಫಯಾಜ್ ಅಡ್ಡಗಟ್ಟಿ ವಿದ್ಯಾರ್ಥಿನಿಯ ಗುಪ್ತಾಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ.

ಈ ವೇಳೆ ವಿದ್ಯಾರ್ಥಿನಿ ಕಿರುಚಾಡಿ ಆರೋಪಿಯನ್ನು ಹಿಡಿದು ಮುಖ್ಯರಸ್ತೆಗೆ ಎಳೆದುಕೊಂಡು ಬಂದಿದ್ದಾಳೆ. ವಿದ್ಯಾರ್ಥಿನಿಯ ಕೈ’ಕಚ್ಚಿದ ಆರೋಪಿ ಪರಾರಿಯಾಗಲು ಯತ್ನಿಸಿದ್ದು, ಧಾವಿಸಿ ಬಂದು ಆರೋಪಿಯನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಹಿಂದೆ ಬಾಲಾಪರಾಧಿಯಾಗಿ ಆರೋಪಿ ಜೈಲು ಸೇರಿದ್ದ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...