ಬೆಳಗಾವಿ: ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಜುಲೈ 14 ರಿಂದ ಒಂದು ವಾರ ಲಾಕ್ಡೌನ್ ಜಾರಿ ಮಾಡಲಾಗಿದ್ದು ಇದೇ ಮಾದರಿಯಲ್ಲಿ ಬೆಳಗಾವಿ ಜಿಲ್ಲಾ ಗೋಕಾಕ್ ತಾಲೂಕಿನಲ್ಲಿ 7 ರಿಂದ 10 ದಿನಗಳ ಕಾಲ ಲಾಕ್ಡೌನ್ ಜಾರಿ ಮಾಡಲಾಗುವುದು.
ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ, ಗೋಕಾಕ್ ತಾಲೂಕಿನಲ್ಲಿ ಕೊರೊನಾ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಾಕ್ಡೌನ್ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಸಂಡೆ ಲಾಕ್ಡೌನ್ ನಡುವೆಯೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕೋರೋನಾ ಚೈನ್ ಕಟ್ ಮಾಡುವ ಉದ್ದೇಶದಿಂದ ಗೋಕಾಕ್ ತಾಲೂಕಿನಲ್ಲಿ ಸಂಪೂರ್ಣ ಲಾಕ್ಡೌನ್ ಜಾರಿ ಮಾಡಲಾಗುವುದು.
ಅಗತ್ಯ ವಸ್ತು ಮತ್ತು ಸೇವೆ ಹೊರತಾಗಿ ಉಳಿದ ಎಲ್ಲಾ ಚಟುವಟಿಕೆಗಳನ್ನು ಕಂಪ್ಲೀಟ್ ಬಂದ್ ಮಾಡಲಾಗುವುದು. ಜನ ಮನೆಯಲ್ಲೇ ಇರುವ ಮೂಲಕ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.