
ಬೆಂಗಳೂರು: ಬೆಂಗಳೂರಿನಲ್ಲಿ ವಿಡಿಯೋ ಮಾಡಿ ಸಹನಟಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಗೆ ಮೋಸ ಮಾಡಿದ ಆರೋಪಿ ದಿನೇಶ್ ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ.
ಮೇ 28 ರಂದು 29 ವರ್ಷದ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದರು. ತಾವರೆಕೆರೆಯ ಕೃಷ್ಣಮೂರ್ತಿ ಲೇಔಟ್ನಲ್ಲಿ ಘಟನೆ ನಡೆದಿದ್ದು ಮದುವೆಯಾಗುವುದಾಗಿ ನಟಿಯನ್ನು ನಂಬಿಸಿ ದೈಹಿಕವಾಗಿ ಬಳಸಿಕೊಂಡಿದ್ದಲ್ಲದೇ, 5 ಲಕ್ಷ ರೂ. ಹಣ ಪಡೆದು ವಂಚಿಸಲಾಗಿತ್ತು.
ದೈಹಿಕ ಸಂಬಂಧದಿಂದ ಗರ್ಭಿಣಿಯಾಗಿದ್ದ ನಟಿಗೆ ಗರ್ಭಪಾತ ಮಾಡಿಸಿದ ಆರೋಪ ಕೇಳಿಬಂದಿದೆ. ಇದರಿಂದ ನೊಂದ ಸಹನಟಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.