ಹರ್ಬಲ್ ಉತ್ಪನ್ನ ಮಾರಾಟ ನೆಪದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಚಂದ್ರಾ ಲೇಔಟ್ ಠಾಣೆ ಪೊಲೀಸರು ಹರ್ಬಲ್ ಆಯುರ್ವೇದ ಕೇಂದ್ರದ ಮೇಲೆ ದಾಳಿ ನಡೆಸಿದ್ದಾರೆ. ಸಂಜೀವಿನಿ ನಗರದಲ್ಲಿರುವ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಲಾಗಿದ್ದು, ವೇಶ್ಯಾವಾಟಿಕೆ ನಡೆಸುತ್ತಿದ್ದ ದಂಪತಿಯನ್ನು ಬಂಧಿಸಲಾಗಿದೆ.
ಪ್ರೇಮಾ(38), ರಾಮು(49) ಬಂಧಿತ ಆರೋಪಿಗಳು ಎಂದು ಹೇಳಲಾಗಿದೆ. ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.