alex Certify ಡಿವೈಡರ್ ಗೆ ಡಿಕ್ಕಿಯಾಗಿ ಕಾರ್ ಗೆ ಬೆಂಕಿ: ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಐವರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿವೈಡರ್ ಗೆ ಡಿಕ್ಕಿಯಾಗಿ ಕಾರ್ ಗೆ ಬೆಂಕಿ: ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಐವರು

ಬೆಂಗಳೂರು: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರ್ ಬೆಂಕಿ ತಗಲಿ ಹೊತ್ತಿ ಉರಿದ ಘಟನೆ ಬೆಂಗಳೂರಿನ ನ್ಯೂ ಬಿಇಎಲ್ ರಸ್ತೆಯಲ್ಲಿ ನಡೆದಿದೆ.

ಹೋಂಡಾ ಅಕಾರ್ಡ್ ಕಾರ್ ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ಡಿವೈಡರ್ ಗೆ ಡಿಕ್ಕಿ ಹೊಡೆದು ಬೆಂಕಿ ತಗುಲಿದ್ದು ನೋಡನೋಡುತ್ತಿದ್ದಂತೆ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.

ವೇಗವಾಗಿ ಬಂದ ಕಾರ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ರಸ್ತೆಯಲ್ಲಿ ಪಲ್ಟಿಯಾಗಿ ಬೆಂಕಿ ತಗುಲಿದೆ. ಈ ವೇಳೆ ಸ್ಥಳೀಯರು ಕಾರಿನಲ್ಲಿದ್ದವರನ್ನು ರಕ್ಷಿಸಿದ್ದಾರೆ. ಚಾಲಕನ ತಲೆಗೆ ಪೆಟ್ಟು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...