
ಬೆಂಗಳೂರಿನ ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ದರೋಡೆಗೆ ಯತ್ನಿಸಲಾಗಿದೆ
5 ದಿನಗಳ ಹಿಂದೆ ಸೆಪ್ಟಂಬರ್ 30 ರಂದು ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿ ಪಿಗ್ಮಿ ಕಲೆಕ್ಟರ್ ವರದರಾಜ್ ಅವರ ಮೇಲೆ ಡ್ರ್ಯಾಗರ್ ನಿಂದ ದಾಳಿ ನಡೆಸಲಾಗಿದೆ. ರೆಡ್ ಪಲ್ಸರ್ ಬೈಕ್ ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಡ್ರ್ಯಾಗರ್ ನಿಂದ ವರದರಾಜ್ ಅವರ ಮೇಲೆ ದಾಳಿ ಮಾಡಿ ಹಣದ ಬ್ಯಾಗ್ ಕೊಡುವಂತೆ ಬೆದರಿಸಿದ್ದಾರೆ.
ವರದರಾಜ್ ಪ್ರತಿರೋಧ ತೋರಿ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡಿದ್ದಾರೆ. ವಿಫಲ ಯತ್ನ ನಡೆಸಿದ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ದರೋಡೆಕೋರರ ದುಷ್ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಸುಬ್ರಹ್ಮಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಎನ್ನಲಾಗಿದೆ.