alex Certify ಫೇಸ್ಬುಕ್ ನಲ್ಲಿ ಅಶ್ಲೀಲ ವಿಡಿಯೋ ಅಪ್ಲೋಡ್: ರೌಡಿ ಶೀಟರ್ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫೇಸ್ಬುಕ್ ನಲ್ಲಿ ಅಶ್ಲೀಲ ವಿಡಿಯೋ ಅಪ್ಲೋಡ್: ರೌಡಿ ಶೀಟರ್ ಅರೆಸ್ಟ್

ಬೆಂಗಳೂರು: ಮಕ್ಕಳ ಅಶ್ಲೀಲ ವಿಡಿಯೋ ಚಿತ್ರಗಳನ್ನು ಫೇಸ್ ಬುಕ್ ನಲ್ಲಿ ಅಪ್ ಲೋಡ್ ಮಾಡುತ್ತಿದ್ದ ರೌಡಿಶೀಟರ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಚಾಮರಾಜಪೇಟೆಯ ಜಿಂಕೆನಗರ, ವಿಠಲನಗರ ನಿವಾಸಿ ಮಂಜುನಾಥ್ ಅಲಿಯಾಸ್ ಕೋಳಿ ಮಂಜ ಬಂಧಿತ ಆರೋಪಿಯಾಗಿದ್ದಾನೆ. ಮಂಜುನಾಥನ ವಿರುದ್ಧ ಕಳ್ಳತನ, ದರೋಡೆ ಸೇರಿದಂತೆ 8 ಪ್ರಕರಣ ದಾಖಲಾಗಿವೆ.

ಈತ ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಫೇಸ್ ಬುಕ್ ನಲ್ಲಿ ಅಪ್ ಲೋಡ್ ಮಾಡಿದ ಬಗ್ಗೆ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಮುಂದುವರೆದಿದೆ. ಮಕ್ಕಳ ಅಶ್ಲೀಲ ವಿಡಿಯೋ, ಚಿತ್ರ ಫೇಸ್ ಬುಕ್ ನಲ್ಲಿ ಅಪ್ ಲೋಡ್ ಮಾಡಿ ಲೈಂಗಿಕ ಅಪರಾಧಗಳನ್ನು ಎಸಗಿದವರ ವಿರುದ್ಧ ಪರಿಶೀಲಿಸಿ ಕಾನೂನು ಕ್ರಮ ಜರುಗಿಸುವಂತೆ ಸೈಬರ್ ವಿಭಾಗದ ಅಧಿಕಾರಿಗಳು ಸೂಚನೆ ನೀಡಿದ್ದು ಅಂತೆಯೇ ಕಾರ್ಯಾಚರಣೆ ನಡೆಸಿದ ಪೊಲೀಸರು ಕೋಳಿ ಮಂಜನನ್ನು ಬಂಧಿಸಿದ್ದಾರೆ.

ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಉಪ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ಮಾರ್ಗದರ್ಶನದಲ್ಲಿ ವಿಶೇಷ ವಿಚಾರಣ ದಳದ ಸಹಾಯಕ ಪೊಲೀಸ್ ಆಯುಕ್ತ ಡಿ.ಟಿ. ವಿರೂಪಾಕ್ಷ ನೇತೃತ್ವದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಹೆಚ್.ಎಸ್. ಜಗದೀಶ್ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...