alex Certify ಗಲಭೆಕೋರರಿಗಾಗಿ ಮುಂದುವರೆದ ಬೇಟೆ, ತಡರಾತ್ರಿ ಮಿಂಚಿನ ಕಾರ್ಯಾಚರಣೆಯಲ್ಲಿ 35 ಮಂದಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಲಭೆಕೋರರಿಗಾಗಿ ಮುಂದುವರೆದ ಬೇಟೆ, ತಡರಾತ್ರಿ ಮಿಂಚಿನ ಕಾರ್ಯಾಚರಣೆಯಲ್ಲಿ 35 ಮಂದಿ ಅರೆಸ್ಟ್

ಬೆಂಗಳೂರಿನ ಕೆಜಿ ಹಳ್ಳಿ, ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾತ್ರಿ ಕಾರ್ಯಾಚರಣೆ ನಡೆಸಿ 35 ಆರೋಪಿಗಳನ್ನು ಬಂಧಿಸಲಾಗಿದೆ.

ಸಿಸಿಬಿ ಪೊಲೀಸರು, ಹಾಗೂ ಡಿಜೆಹಳ್ಳಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಗಲಭೆಗೆ ಸಂಬಂಧಿಸಿದಂತೆ 340 ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ. ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಇನ್ನೂ ಹಲವರು ಅವಿತುಕೊಂಡ ಸುಳಿವು ಪಡೆದ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಘಟನೆ ನಡೆದ ಸಂದರ್ಭದಲ್ಲಿ ಸಿಸಿ ಕ್ಯಾಮೆರಾದಲ್ಲಿ ದಾಖಲಾದ ದೃಶ್ಯಗಳು, ವಾಹಿನಿಗಳ ಕ್ಯಾಮೆರಾಗಳಲ್ಲಿನ ದೃಶ್ಯಗಳು ಮತ್ತು ಮೊಬೈಲ್ ಗಳಲ್ಲಿ ಸೆರೆಯಾದ ದೃಶ್ಯಗಳನ್ನು ಪರಿಶೀಲಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಗಲಭೆಗೆ ಸಂಬಂಧಿಸಿದಂತೆ 51 ಎಫ್ಐಆರ್ ದಾಖಲಾಗಿವೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...