ರಾಜಧಾನಿ ಬೆಂಗಳೂರಿನಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 1235 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಒಟ್ಟು ಸೋಂಕಿತರ ಸಂಖ್ಯೆ 9580 ಕ್ಕೆ ಏರಿಕೆಯಾಗಿದ್ದು, ಇವತ್ತು 302 ಮಂದಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 1267 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಬರೋಬ್ಬರಿ 8167 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇದುವರೆಗೆ 145 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇಷ್ಟು ದಿನ 500 ರ ಗಡಿದಾಟಿದ ಸೋಂಕಿತರ ಸಂಖ್ಯೆ ನಿನ್ನೆಯಿಂದ 1000 ದ ಗಡಿಯನ್ನೂ ದಾಟಿರುವುದು ಬೆಂಗಳೂರು ಜನತೆಯನ್ನು ಬೆಚ್ಚಿಬೀಳಿಸಿದೆ.