ಬೆಂಗಳೂರು: ಬೆಂಗಳೂರು ನಗರದಲ್ಲಿ ಇವತ್ತು ಒಂದೇ ದಿನ 2270 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಬೆಂಗಳೂರಲ್ಲಿ ಒಟ್ಟು ಸೋಂಕಿತರ ಸಂಖ್ಯೆ 51,091 ಕ್ಕೆ ಏರಿಕೆಯಾಗಿದೆ. ಇವತ್ತು 1118 ಜನ ಬಿಡುಗಡೆಯಾಗಿದ್ದು, ಇದುವರೆಗೆ 13,879 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
36,224 ಸಕ್ರಿಯ ಪ್ರಕರಣಗಳಿದ್ದು, ಬೆಂಗಳೂರಿನಲ್ಲಿ ಇವತ್ತು ಒಂದೇ ದಿನ 30 ಜನ ಮೃತಪಟ್ಟಿದ್ದಾರೆ. ಇದುವರೆಗೆ 987 ಜನ ಸಾವನ್ನಪ್ಪಿದ್ದಾರೆ.