ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ದಾಖಲೆಯ 5030 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 80,863 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 97 ಜನ ಮೃತಪಟ್ಟಿದ್ದು ಇದುವರೆಗೆ 1616 ಜನ ಸಾವನ್ನಪ್ಪಿದ್ದಾರೆ.
ಬೆಂಗಳೂರಿನಲ್ಲಿ ಇವತ್ತು 2207 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 39,200 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 1038 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 29,091 ಪ್ರಕ್ರಿಯೆ ಪ್ರಕರಣಗಳಿವೆ. ಇಂದು ಬೆಂಗಳೂರಿನಲ್ಲಿ 47 ಮಂದಿ ಮೃತಪಟ್ಟಿದ್ದು, ಒಟ್ಟು 782 ಜನ ಸಾವನ್ನಪ್ಪಿದ್ದಾರೆ.