ರಾಜಧಾನಿ ಬೆಂಗಳೂರಿನಲ್ಲಿ ಇವತ್ತು 2967 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು 40 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 2 ಸಾವಿರ ಗಡಿ ದಾಟಿದ್ದು, 2005 ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಸಂಖ್ಯೆ 1,32,092 ಕ್ಕೆ ಏರಿಕೆಯಾಗಿದೆ. ಇವತ್ತು 1137 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು ಇದುವರೆಗೆ 91,180 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 38,906 ಸಕ್ರಿಯ ಪ್ರಕರಣಗಳಿವೆ.