
ಬೆಂಗಳೂರಿನಲ್ಲಿ ಕೊರೋನಾ ಸೋಂಕಿಗೆ ನಾಲ್ವರು ಮೃತಪಟ್ಟಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೊನಾ ಸೋಂಕು ತಗಲಿದ ನಾಲ್ವರು ಮೃತಪಟ್ಟಿದ್ದಾರೆ.
29 ವರ್ಷದ ಯುವತಿ, 70 ವರ್ಷ ಮತ್ತು 63 ವರ್ಷದ ವೃದ್ಧರು, 73 ವರ್ಷದ ವೃದ್ಧೆ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಸೋಂಕು ತಗುಲಿ ಲಕ್ಷಣ ಕಾಣಿಸಿಕೊಂಡರೂ ಯುವತಿ ವಿಳಂಬವಾಗಿ ಆಸ್ಪತ್ರೆಗೆ ಬಂದಿದ್ದರಿಂದ ಉಸಿರಾಟದ ಸಮಸ್ಯೆ ತೀವ್ರವಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.