ಬೆಂಗಳೂರು: ರಾಜ್ಯದಲ್ಲಿ ಇಂದು 141 ಮಂದಿಗೆ ಕೊರೊನಾ ಸೋಂಕು ತಗಲಿದ್ದು ಒಟ್ಟು 2922 ಮಂದಿಗೆ ಸೋಂಕು ತಗುಲಿದಂತಾಗಿದೆ.
ಬೆಂಗಳೂರು ನಗರದಲ್ಲಿ ಇವತ್ತು ಒಂದೇ ದಿನ 33 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 336 ಕ್ಕೆ ಏರಿಕೆಯಾಗಿದೆ. ಇವತ್ತು ಬೆಂಗಳೂರಿನಲ್ಲಿ 21 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಇದುವರೆಗೆ 172 ಮಂದಿ ಬಿಡುಗಡೆಯಾಗಿದ್ದಾರೆ. 153 ಸಕ್ರಿಯ ಪ್ರಕರಣಗಳು ಇದ್ದು, 10 ಮಂದಿ ಸಾವನ್ನಪ್ಪಿದ್ದಾರೆ.
ಇವತ್ತು ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಒಬ್ಬರು ಸಾವನ್ನಪ್ಪಿದ್ದು ಒಟ್ಟು 49 ಜನ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಸೋಂಕಿತರಲ್ಲಿ ಬಹುತೇಕರು ಹೊರ ರಾಜ್ಯದಿಂದ ಬಂದವರೇ ಆಗಿದ್ದಾರೆ.