alex Certify ಆಸ್ಪತ್ರೆಯಿಂದ ಬಂದ ಇಮ್ರಾನ್ ಪಾಶಾಗೆ ಅದ್ಧೂರಿ ಸ್ವಾಗತದೊಂದಿಗೆ ರೋಡ್ ಶೋ, ಪೊಲೀಸರ ಖಡಕ್ ವಾರ್ನಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ಪತ್ರೆಯಿಂದ ಬಂದ ಇಮ್ರಾನ್ ಪಾಶಾಗೆ ಅದ್ಧೂರಿ ಸ್ವಾಗತದೊಂದಿಗೆ ರೋಡ್ ಶೋ, ಪೊಲೀಸರ ಖಡಕ್ ವಾರ್ನಿಂಗ್

ಬೆಂಗಳೂರು: ಕೊರೋನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಪಾದರಾಯನಪುರ ಕಾರ್ಪೊರೇಟರ್ ಇಮ್ರಾನ್ ಪಾಶಾ ಅವರಿಗೆ ಅದ್ದೂರಿ ಸ್ವಾಗತ ನೀಡಿ ರೋಡ್ ಶೋ ನಡೆಸಲಾಗಿದೆ.

ರೋಡ್ ಶೋಗೆ ಅನುಮತಿ ಕೊಟ್ಟಿದ್ದು ಯಾರು ಎಂದು ಇಮ್ರಾನ್ ಪಾಷಾ ಅವರನ್ನು ಪೊಲೀಸರು ಪ್ರಶ್ನಿಸಿದ್ದಾರೆ. ಇಮ್ರಾನ್ ಪಾಶಾಗೆ ಖಡಕ್ ವಾರ್ನಿಂಗ್ ಮಾಡಿದ್ದಾರೆ. ಮೆರವಣಿಗೆ ತಡೆದು ಮನೆಗೆ ಹೋಗುವಂತೆ ತಾಕೀತು ಮಾಡಿದ್ದಾರೆ.

ಬೆಂಗಳೂರಿನ ಪಾದರಾಯನಪುರ ವಾರ್ಡ್ ಕಾರ್ಪೋರೇಟರ್ ಇಮ್ರಾನ್ ಪಾಶಾ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಅವರನ್ನು ಅದ್ದೂರಿಯಾಗಿ ಸ್ವಾಗತಿಸಿದ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದ್ದು ಸಾಮಾಜಿಕ ಅಂತರ ನಿರ್ಲಕ್ಷಿಸಿ ಮೆರವಣಿಗೆ ನಡೆಸಲಾಗಿದೆ.

ಆಸ್ಪತ್ರೆಯಿಂದ ನೇರವಾಗಿ ಮನೆಗೆ ತೆರಳದೇ ಲಾಕ್ ಡೌನ್ ನಿಯಮ ಉಲ್ಲಂಘಿಸಿ ಮೆರವಣಿಗೆ ಮಾಡಿದ್ದು ಟ್ರಾಫಿಕ್ ಜಾಮ್ ಉಂಟಾಗಿದೆ. ಈ ವೇಳೆ ಪೊಲೀಸರು ವಾರ್ನಿಂಗ್ ಮಾಡಿ, ಮೆರವಣಿಗೆಯಲ್ಲಿದ್ದವರನ್ನು ಚದುರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...