alex Certify BIG NEWS: 10 ಸಾವಿರ ಗಡಿ ದಾಟಿದ ಸಾವಿನ ಸಂಖ್ಯೆ – ಇವತ್ತು 7606 ಜನರಿಗೆ ಕೊರೊನಾ ಪಾಸಿಟಿವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 10 ಸಾವಿರ ಗಡಿ ದಾಟಿದ ಸಾವಿನ ಸಂಖ್ಯೆ – ಇವತ್ತು 7606 ಜನರಿಗೆ ಕೊರೊನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು 7606 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 7,17,915 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇವತ್ತು 70 ಮಂದಿ ಸೋಂಕಿತರು ಮೃತಪಟ್ಟಿದ್ದು, 10,036 ಜನ ಇದುವರೆಗೆ ಸಾವನ್ನಪ್ಪಿದ್ದಾರೆ. 5,92,084 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 1,15,776 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಇವತ್ತು ಒಂದೇ ದಿನ 3498 ಜನರಿಗೆ ಸೋಂಕು ತಗಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,85,085 ಕ್ಕೆ ಏರಿಕೆಯಾಗಿದೆ. ಇವತ್ತು 18 ಮಂದಿ ಸೋಂಕಿತರು ಬೆಂಗಳೂರಿನಲ್ಲಿ ಮೃತಪಟ್ಟಿದ್ದು, ಇದುವರೆಗೆ 3362 ಜನ ಸಾವನ್ನಪ್ಪಿದ್ದಾರೆ. 2,17,122 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 64,570 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...