
ಬೆಂಗಳೂರು: ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಂಡೇಟು ತಗುಲಿ ಗಾಯಗೊಂಡಿದ್ದ ಮತ್ತೊಬ್ಬ ಆರೋಪಿ ಮೃತಪಟ್ಟಿದ್ದಾನೆ.
ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೈಯದ್ ನದೀಮ್(22) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಗೋಲಿಬಾರ್ ಸಂದರ್ಭದಲ್ಲಿ ಗುಂಡೇಟು ತಗುಲಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದ ಮೃತಪಟ್ಟಿದ್ದಾನೆ. ಆತನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಹೇಳಲಾಗಿದೆ. ಇದರೊಂದಿಗೆ ಗೋಲಿಬಾರ್ ನಲ್ಲಿ ಮೃತಪಟ್ಟವರ ಸಂಖ್ಯೆ 4 ಕ್ಕೆ ಏರಿಕೆಯಾಗಿದೆ.