ಬೆಂಗಳೂರು: ಡ್ರೋನ್ ಪ್ರತಾಪ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ಇದಾದ ನಂತರ ಜರ್ಮನಿಯ ಡ್ರೋನ್ ಕಂಪನಿ ಕೂಡ ಡ್ರೋನ್ ಪ್ರತಾಪ್ ವಿರುದ್ಧ ಕೇಸು ದಾಖಲಿಸಲು ಮುಂದಾಗಿದೆ ಎನ್ನಲಾಗಿದೆ.
ಮತ್ತೆರಡು ಪ್ರಕರಣದಲ್ಲಿ ಪ್ರತಾಪ್ ವಿರುದ್ಧ ಕೇಸ್ ದಾಖಲಿಸಲಾಗಿದೆ. ಹೈದರಾಬಾದ್ ನಿಂದ ಬೆಂಗಳೂರಿಗೆ ಆಗಮಿಸಿದ ಅವರು ಹೋಂ ಕ್ವಾರಂಟೈನ್ ನಲ್ಲಿ ಇರದೆ ನಿಯಮ ಉಲ್ಲಂಘಿಸಿ ಖಾಸಗಿ ವಾಹಿನಿಗೆ ಸಂದರ್ಶನ ನೀಡಲು ಹೋಗಿದ್ದರು. ಅಲ್ಲದೆ ಕ್ವಾರಂಟೈನ್ ಗೆ ಒಳಗಾಗಿದ್ದರೂ ತನ್ನಲ್ಲಿ ಮೊಬೈಲ್ ಇಟ್ಟುಕೊಳ್ಳದೇ ಪ್ರತಾಪ್ ಬೇರೆಯವರ ಬಳಿ ತಮ್ಮ ಮೊಬೈಲ್ ಕೊಟ್ಟು ಹೋಗಿದ್ದ ಹಿನ್ನೆಲೆಯಲ್ಲಿ ಅವರ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಹೋಮ್ ಕ್ವಾರಂಟೈನ್ ಸೀಲ್ ಹಾಕಿದ್ದರೂ ಕೂಡ ಡ್ರೋನ್ ಪ್ರತಾಪ್ ನಿಯಮ ಉಲ್ಲಂಘಿಸಿ ತಿರುಗಾಡಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ ಎನ್ನಲಾಗಿದೆ.