ಬೆಂಗಳೂರಿನಲ್ಲಿ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಡುಯೆಟ್ ಬಾರ್ ಮಾಲೀಕ ಮನೀಶ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಮೇಲೆ ಫೈರಿಂಗ್ ಮಾಡಿದ್ದಾರೆ.
ಬೆಂಗಳೂರಿನ ಶಾಂತಿನಗರದ ಸ್ಮಶಾನದಲ್ಲಿ ಗುಂಡಿನ ದಾಳಿ ನಡೆಸಲಾಗಿದೆ. ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿ ಕರೆತರುತ್ತಿರುವ ವೇಳೆಯಲ್ಲಿ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗಲು ಆರೋಪಿಗಳು ಯತ್ನಿಸಿದ್ದಾರೆ.
ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಗುಂಡೇಟು ತಗುಲಿ ಗಾಯಗೊಂಡಿರುವ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೀಶ್ ಶೆಟ್ಟಿ ಅವರ ಮೇಲೆ ಫೈರಿಂಗ್ ಮಾಡಿ ಹತ್ಯೆಗೈದಿದ್ದ ಆರೋಪಿಗಳನ್ನು 48 ಗಂಟೆಯೊಳಗೆ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎನ್ನಲಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.