alex Certify ಪ್ರವಾಸದ ವೇಳೆ ಪರಿಚಯ, ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಯುವಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರವಾಸದ ವೇಳೆ ಪರಿಚಯ, ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಯುವಕ

ಬೆಂಗಳೂರು: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ ಯುವಕ ವಂಚಿಸಿದ ಘಟನೆ ನಡೆದಿದೆ.

ಬೆಂಗಳೂರಿನ ಆಡುಗೋಡಿಯ ಬಾಲಪ್ಪ ಲೇಔಟ್ ನಿವಾಸಿಯಾಗಿರುವ 32 ವರ್ಷದ ಯುವತಿ ದೂರು ನೀಡಿದ್ದು ಆಡುಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 2018 ರಲ್ಲಿ ಪಾಂಡಿಚೇರಿಗೆ ಪ್ರವಾಸಕ್ಕೆ ಹೋಗಿದ್ದ ವೇಳೆ ಬೆಂಗಳೂರಿನ ಅಕ್ಷಯ್ ಕುಮಾರ್ ಪರಿಚಯವಾಗಿದ್ದ.

ಬಳಿಕ ಇಬ್ಬರ ನಡುವೆ ಗೆಳೆತನವಾಗಿ ಪ್ರೀತಿಸಿದ್ದು ಮದುವೆಯಾಗುವುದಾಗಿ ನಂಬಿಸಿದ ಆರೋಪಿ ದೈಹಿಕ ಸಂಪರ್ಕ ಬೆಳೆಸಿದ್ದ. ಆತನಿಗೆ ಬ್ಯಾಂಕಿನಲ್ಲಿ ಸಾಲ ಪಡೆದು ಕಾರು ಕೊಡಿಸಿದ್ದ ಯುವತಿ ದುಬಾರಿ ಬೆಲೆಯ ಮೊಬೈಲ್ ಮತ್ತು ಬಟ್ಟೆಗಳನ್ನು ಉಡುಗೊರೆಯಾಗಿ ನೀಡಿದ್ದರು. ಎಲ್ಲವನ್ನು ಪಡೆದುಕೊಂಡ ಯುವಕ ವಂಚಿಸಿದ್ದಾನೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...