alex Certify ಬೆಂಗಳೂರು ಗಲಭೆ: ಬಂಧಿತರಲ್ಲಿ ನಿರಪರಾಧಿಗಳಿಗೆ ಶಿಕ್ಷೆ ಬೇಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ಗಲಭೆ: ಬಂಧಿತರಲ್ಲಿ ನಿರಪರಾಧಿಗಳಿಗೆ ಶಿಕ್ಷೆ ಬೇಡ

ಬೆಂಗಳೂರು: ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಗಲಭೆ ದುರಾದೃಷ್ಟಕರ ಎಂದು ಹೇಳಿದ್ದಾರೆ.

ದೇಶದ ಯಾವುದೇ ಭಾಗದಲ್ಲಿ ಇಂತಹ ಘಟನೆ ನಡೆಯಬಾರದು. ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಮೇಲೆ ದಾಳಿಯಾಗಿದ್ದು ದುರಾದೃಷ್ಟಕರ ಎಂದು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 150 ಜನರನ್ನು ಪೋಲಿಸರು ಬಂಧಿಸಿ ತನಿಖೆ ಕೈಗೊಂಡಿದ್ದಾರೆ. ಆದರೆ ಬಂಧಿತರಲ್ಲಿ ಎಷ್ಟು ಮಂದಿ ನಿಜವಾದ ಅಪರಾಧಿಗಳು ಇದ್ದಾರೆ ಎಂಬುದನ್ನು ಗಮನಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ನಿರಪರಾಧಿಗಳಿಗೆ ಶಿಕ್ಷೆ ಆಗಬಾರದು ಎಂದು ತಿಳಿಸಿದ್ದಾರೆ.

ನಿರಪರಾಧಿಗಳಿಗೆ ಶಿಕ್ಷೆಯಾಗದಂತೆ ನೋಡಿಕೊಳ್ಳಬೇಕು. ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಸರ್ಕಾರ ಕಠಿಣ ಕ್ರಮ ಜರುಗಿಸಬೇಕು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...