alex Certify ಹೊಟ್ಟೆನೋವಿನಿಂದ ಸ್ಕ್ಯಾನಿಂಗ್ ಮಾಡಿಸಿಕೊಂಡ ಯುವತಿಗೆ ಬಿಗ್ ಶಾಕ್…! ಏನಿತ್ತು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಟ್ಟೆನೋವಿನಿಂದ ಸ್ಕ್ಯಾನಿಂಗ್ ಮಾಡಿಸಿಕೊಂಡ ಯುವತಿಗೆ ಬಿಗ್ ಶಾಕ್…! ಏನಿತ್ತು ಗೊತ್ತಾ…?

ಬೆಂಗಳೂರು: ಯುವತಿಗೆ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು ಬಟ್ಟೆಯ ತುಂಡನ್ನು ಹೊಟ್ಟೆಯಲ್ಲಿಯೇ ಬಿಟ್ಟು ಹೊಲಿಗೆ ಹಾಕಿದ ಪ್ರಕರಣ ಬೆಂಗಳೂರಿನಲ್ಲಿ ನಡೆದಿದ್ದು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಯುವತಿಗೆ ಕೆಲ ದಿನಗಳ ನಂತರ ಹೊಟ್ಟೆ ನೋವು ಕಾಣಿಸಿಕೊಂಡು ಸ್ಕ್ಯಾನಿಂಗ್ ಮಾಡಿಸಿದ ಸಂದರ್ಭದಲ್ಲಿ ಹೊಟ್ಟೆಯಲ್ಲಿ ಬಟ್ಟೆಯ ತುಂಡು ಇರುವುದು ಗೊತ್ತಾಗಿದೆ. ಮತ್ತೆ ಶಸ್ತ್ರಚಿಕಿತ್ಸೆ ನಡೆಸಿ ಬಟ್ಟೆ ಪೀಸ್ ಅನ್ನು ಹೊರ ತೆಗೆದು ಆಕೆಗೆ ಮರುಜೀವ ನೀಡಲಾಗಿದೆ.

ಆರ್.ಟಿ. ನಗರ ನಿವಾಸಿಯಾಗಿರುವ 25 ವರ್ಷದ ಯುವತಿಗೆ ಮಾರ್ಚ್ 17 ರಂದು ಬನ್ನೇರುಘಟ್ಟ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಗಾಯವಾಗಿದೆ. ಬನಶಂಕರಿ ಮೂರನೇ ಹಂತದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಹೊಟ್ಟೆಯ ಒಳಭಾಗದಲ್ಲಿ ಗಾಯವಾಗಿದೆ ಎಂದು ಶಸ್ತ್ರಚಿಕಿತ್ಸೆ ನೆರವೇರಿಸಿದ ವೈದ್ಯರು ಮಾರ್ಚ್ 23 ರವರೆಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದಾರೆ. ನಂತರ ಯುವತಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು ಆರೋಗ್ಯದಲ್ಲಿ ಏರುಪೇರಾದ ಕಾರಣ ಬನ್ನೇರುಘಟ್ಟದ ಪ್ರತಿಷ್ಠಿತ ಆಸ್ಪತ್ರೆಗೆ ಕರೆದೊಯ್ಯಲು ವೈದ್ಯರು ಸೂಚಿಸಿದ್ದಾರೆ.

ಬನ್ನೇರುಘಟ್ಟದ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಯುವತಿಯ ಉಸಿರಾಟದ ಸಮಸ್ಯೆ ಸರಿಪಡಿಸಿ ಏಪ್ರಿಲ್ 4 ರಂದು ಡಿಸ್ಚಾರ್ಜ್ ಮಾಡಲಾಗಿದೆ. ಮತ್ತೆ ಮೂರು ದಿನದಲ್ಲಿ ಆಕೆಗೆ ಆರೋಗ್ಯದ ಸಮಸ್ಯೆ ಕಾಣಿಸಿಕೊಂಡಿದ್ದು ಏಪ್ರಿಲ್ 16ರಂದು ಆಸ್ಪತ್ರೆಗೆ ದಾಖಲಾಗಿ ಸ್ಕ್ಯಾನಿಂಗ್ ಮಾಡಿದಾಗ ಹೊಟ್ಟೆಯಲ್ಲಿ ಬಟ್ಟೆಯ ತುಣುಕು ಕಂಡುಬಂದಿದೆ. ಅದನ್ನು ಶಸ್ತ್ರಚಿಕಿತ್ಸೆ ಮಾಡಿ ಹೊರತೆಗೆಯಲಾಗಿದೆ.

ಬನಶಂಕರಿ ಮೂರನೇ ಹಂತದ ಖಾಸಗಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಯುವತಿ ಪೋಷಕರು ಗಿರಿನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...