ಬೆಂಗಳೂರು: ಬೆಂಗಳೂರಿನಲ್ಲಿ ಒಂದು ವಾರದ ಲಾಕ್ಡೌನ್ ಮತ್ತೆ ವಿಸ್ತರಣೆಯಾಗಲಿದೆ ಎಂದು ಹೇಳಲಾಗಿದೆ. ಈಗಿರುವ ಒಂದು ವಾರದ ಲಾಕ್ಡೌನ್ ಕೊರೋನಾ ಕಂಟ್ರೋಲ್ ಮಾಡಲು ಸಾಕಾಗುವುದಿಲ್ಲ.
ಹಾಗಾಗಿ ಕೊರೋನಾ ಚೈನ್ ಲಿಂಕ್ ಬ್ರೇಕ್ ಮಾಡಲು ಇನ್ನು 15 ದಿನ ಬೇಕಾಗಬಹುದು ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ 15 ದಿನ ಲಾಕ್ಡೌನ್ ಮುಂದುವರಿಸುವಂತೆ ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಅಧಿಕಾರಿಗಳು ಮನವಿ ಮಾಡಿದ್ದಾರೆ. ಕೊರೋನಾ ಚೈನ್ ಲಿಂಕ್ ಬ್ರೇಕ್ ಮಾಡಲು ಲಾಕ್ಡೌನ್ ಮುಂದುವರಿಸಬೇಕೆಂದು ಮನವಿ ಮಾಡಲಾಗಿದೆ.
ಬೆಂಗಳೂರಿನಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಪ್ರತಿ ದಿನ ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣ ಕಂಡುಬರುತ್ತಿವೆ. ಹೀಗಾಗಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ 1 ವಾರ ಲಾಕ್ಡೌನ್ ಮಾಡಲಾಗಿದ್ದು, ಇದನ್ನು ವಿಸ್ತರಿಸಬೇಕೆಂದು ಬಿಬಿಎಂಪಿ ಅಧಿಕಾರಿಗಳು ಸರ್ಕಾರಕ್ಕೆ ಮನವಿ ಮಾಡಿದ್ದು, ಸರ್ಕಾರ ಲಾಕ್ ಡೌನ್ ವಿಸ್ತರಿಸಲು ಮುಂದಾಗಿದೆ ಎನ್ನಲಾಗಿದೆ.