ಬೆಂಗಳೂರು: ಮತ್ತೆ ಒಂದು ವಾರ ಲಾಕ್ಡೌನ್ ಗೆ ಸರ್ಕಾರ ನಿರ್ಧಾರ ಕೈಗೊಂಡಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಮತ್ತೆ ಒಂದು ವಾರ ಲಾಕ್ಡೌನ್ ಜಾರಿಗೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ.
ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಮಂಗಳವಾರ ರಾತ್ರಿ 8 ಗಂಟೆಯಿಂದ ಕಂಪ್ಲೀಟ್ ಲಾಕ್ಡೌನ್ ಜಾರಿ ಮಾಡಲಾಗುವುದು.
ಜುಲೈ 14 ರಿಂದ ಒಂದು ವಾರ ಕಾಲ ಬೆಂಗಳೂರು ಬಂದ್ ಆಗಲಿದೆ. ರಾಜ್ಯ ಸರ್ಕಾರದಿಂದ ಅಧಿಕೃತ ಘೋಷಣೆ ಮಾಡಲಾಗಿದ್ದು, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳನ್ನು ಲಾಕ್ ಡೌನ್ ಮಾಡಲಾಗುವುದು ಎಂದು ಹೇಳಲಾಗಿದೆ.