ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಜುಲೈ 14 ರಿಂದ ಒಂದು ವಾರ ಕಾಲ ಲಾಕ್ ಡೌನ್ ಜಾರಿ ಮಾಡಲಾಗಿದೆ.
ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಎರಡು ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿ ಮಾಡಿದ್ದು ಅಗತ್ಯ ಸೇವೆ, ವಸ್ತುಗಳನ್ನು ಹೊರತುಪಡಿಸಿ ಉಳಿದೆಲ್ಲ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ.
ಸೋಮವಾರ ಮತ್ತು ಮಂಗಳವಾರ ರಾತ್ರಿಯವರೆಗೆ ಇತರೆ ವಸ್ತುಗಳ ಖರೀದಿಗೆ ಅವಕಾಶ ಇದೆ. ಉಳಿದಂತೆ ಟ್ಯಾಕ್ಸಿ, ಆಟೋ, ಕ್ಯಾಬ್, ಬಿಎಂಟಿಸಿ, ಕೆಎಎಸ್ಆರ್ಟಿಸಿ ಸಂಚಾರ ಇರುವುದಿಲ್ಲ. ಬಾರ್, ವೈನ್ ಸ್ಟೋರ್ ಬಂದ್ ಆಗಲಿವೆ.
ಶನಿವಾರ ರಾತ್ರಿಯಿಂದ ಆರಂಭವಾಗಿರುವ ನೈಟ್ ಕರ್ಫ್ಯೂ ಸಂಡೇ ಲಾಕ್ ಡೌನ್ ಸೋಮವಾರ ಬೆಳಗ್ಗೆ ಮುಕ್ತಾಯವಾಗಲಿದೆ. ಮಂಗಳವಾರ ರಾತ್ರಿಯಿಂದ ಒಂದು ವಾರ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಯಲ್ಲಿರುತ್ತದೆ ಎಂದು ಹೇಳಲಾಗಿದೆ.