ಬೆಂಗಳೂರಿನ ಚಿಕ್ಕಪೇಟೆಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಸ್ವಯಂಪ್ರೇರಿತವಾಗಿ ಲಾಕ್ ಡೌನ್ ಮಾಡಲು ವ್ಯಾಪಾರಿಗಳು ತೀರ್ಮಾನ ಕೈಗೊಂಡಿದ್ದಾರೆ.
ಒಂದು ವಾರ ವ್ಯಾಪಾರ, ವಹಿವಾಟು ಸ್ಥಗಿತಗೊಳಿಸಿ ಲಾಕ್ಡೌನ್ ಮಾಡಲು 8 -10 ಸಂಘಟನೆಗಳ ಪ್ರಮುಖರು ತೀರ್ಮಾನ ಕೈಗೊಂಡಿದ್ದು ನಾಳೆಯಿಂದ 8 ದಿನ ಸ್ವಯಂಪ್ರೇರಿತವಾಗಿ ಲಾಕ್ಡೌನ್ ಮಾಡಲಾಗುವುದು.
ಚಿಕ್ಕಪೇಟೆ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ವ್ಯಾಪಾರಸ್ಥರು ಲಾಕ್ಡೌನ್ ಮಾಡಲು ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.