ಬೆಂಗಳೂರಿನ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದ ಕೊರೋನಾ ಸೋಂಕಿತ ವೃದ್ಧೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದಲ್ಲಿ ಪತ್ತೆಯಾಗಿದ್ದಾರೆ.
ವೃದ್ಧೆ ಪತ್ತೆಯಾದ ಹಿನ್ನೆಲೆಯಲ್ಲಿ ವೃದ್ಧೆಯ ಮನೆ, ಸುತ್ತಮುತ್ತಲಿನ ಮನೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಸೋಂಕಿತ ವೃದ್ಧೆಯ ಕುಟುಂಬದ ನಾಲ್ವರನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ. ಸೋಂಕಿತ ವೃದ್ಧೆಯನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ಹೇಳಲಾಗಿದೆ.
ಖಾಸಗಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಖಾಸಗಿ ಆಸ್ಪತ್ರೆಯಿಂದ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಬೇಕಿತ್ತು. ಆದರೆ, ಸೋಂಕು ತಗುಲಿರುವುದು ಗೊತ್ತಾಗುತ್ತಿದ್ದಂತೆ ಅವರು ನಾಪತ್ತೆಯಾಗಿದ್ದರು.