ಬೆಂಗಳೂರಿನ ಹೋಟೆಲ್ ವೊಂದರಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ದೆಹಲಿ ಮೂಲದ ಗೌರವ್ ರಾಜ್ ಕರದಮ್ ಮತ್ತು ಆತನ ಪತ್ನಿ ಹೀನಾ ಸಿಂಗ್ ಸೋಲಂಕಿ, ಹೋಟೆಲ್ ವ್ಯವಸ್ಥಾಪಕ ಅಣ್ಣಪ್ಪ ಬಂಧಿತ ಆರೋಪಿಗಳಾಗಿದ್ದಾರೆ. ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿರುವ ಹೋಟೆಲ್ ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿತ್ತು.
ಗೌರವ್ ದಂಧೆ ನಡೆಸುತ್ತಿದ್ದು ಆತನ ಪತ್ನಿ ಯುವತಿಯರನ್ನು ಕರೆತರುತ್ತಿದ್ದರು. ಗ್ರಾಹಕರನ್ನು ಸೆಳೆದು ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಇದಕ್ಕೆ ಹೋಟೆಲ್ ಮ್ಯಾನೇಜರ್ ಸಹಕಾರ ನೀಡುತ್ತಿದ್ದ ಎಂದು ಹೇಳಲಾಗಿದೆ.
ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಯುವತಿಯರನ್ನು ರಕ್ಷಿಸಲಾಗಿದ್ದು ಇದರಲ್ಲಿ ಇಬ್ಬರು ವಿದ್ಯಾರ್ಥಿನಿಯರು ಉತ್ತರಪ್ರದೇಶ ಮತ್ತು ಪಂಜಾಬ್ ಮೂಲದವರಾಗಿದ್ದಾರೆ. ಲಾಕ್ಡೌನ್ ಜಾರಿಯಾಗಿದ್ದರಿಂದ ಪಿಜಿಗೆ ಕಟ್ಟಲು ಹಣವಿಲ್ಲದೆ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.