ಬೆಂಗಳೂರು: ಬೆಂಗಳೂರಿನ 2 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲು ಸರ್ಕಾರ ಮುಂದಾಗಿದ್ದು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ತೀರ್ಮಾನ ಕೈಗೊಳ್ಳಲಾಗಿದೆ.
ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಸಂದರ್ಭದಲ್ಲಿ ಸಾರ್ವಜನಿಕ ಆಸ್ತಿ ಹಾನಿ ಮಾಡಿದ ಗಲಭೆಕೋರಿಗೆ ಸರ್ಕಾರ ಶಾಕ್ ನೀಡಿದ್ದು, ಅವರಿಂದಲೇ ನಷ್ಟವನ್ನು ವಸೂಲಿ ಮಾಡಲಾಗುವುದು. ಗಲಭೆಕೋರರ ಆಸ್ತಿ ಜಪ್ತಿಗೆ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ.
ಈ ಕುರಿತಾಗಿ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಗಲಭೆ ಸಂದರ್ಭದಲ್ಲಿ ಹಾನಿಯಾದ ಸಾರ್ವಜನಿಕ ಆಸ್ತಿ ಮೌಲ್ಯವನ್ನು ಗಲಭೆಕೋರರಿಂದಲೇ ವಸೂಲಿ ಮಾಡಬೇಕೆಂಬ ಸುಪ್ರೀಂಕೋರ್ಟ್ ತೀರ್ಪಿನ ಅನ್ವಯ ರಾಜ್ಯ ಸರ್ಕಾರ ಕೂಡ ಕಾರ್ಯನಿರ್ವಹಿಸಲಿದೆ. ಗಲಭೆಕೋರರಿಂದಲೇ ನಷ್ಟವನ್ನು ವಸೂಲಿ ಮಾಡಲಾಗುವುದು ಎಂದು ಹೇಳಿದ್ದಾರೆ.