alex Certify ತಾಪಮಾನ ಏರಿಕೆ ನಡುವೆಯೂ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಾಪಮಾನ ಏರಿಕೆ ನಡುವೆಯೂ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಮೇಲ್ಮೈ ಸುಳಿಗಾಳಿಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಕಳೆದ ಎರಡು ದಿನಗಳಿಂದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಹಾಸನ, ಕೊಡಗು, ಶಿವಮೊಗ್ಗ, ರಾಮನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹೇಳಲಾಗಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಏಪ್ರಿಲ್ 29ರ ವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಭಾರಿ ಮಳೆ ಹೊರತಾಗಿಯೂ ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುತ್ತಿದೆ. ಗುರುವಾರ ತಡರಾತ್ರಿಯಿಂದ ಶುಕ್ರವಾರ ಬೆಳಗ್ಗೆವರೆಗೆ ಬೆಂಗಳೂರಿನಲ್ಲಿ ಭಾರಿ ಮಳೆಯಾಗಿದ್ದು ಮಳೆಯಿಂದ ರಸ್ತೆಗಳಿಗೆ ಹಾನಿಯಾಗಿದೆ. ಕಾಂಪೌಂಡ್ ಕುಸಿದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...