alex Certify ಬಿರುಗಾಳಿ ಸಹಿತ ಧಾರಾಕಾರ ಮಳೆಯಿಂದ ತತ್ತರಿಸಿದ ಬೆಂಗಳೂರು ಜನತೆಗೆ ಮತ್ತೆ ʼಶಾಕಿಂಗ್ ನ್ಯೂಸ್ʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿರುಗಾಳಿ ಸಹಿತ ಧಾರಾಕಾರ ಮಳೆಯಿಂದ ತತ್ತರಿಸಿದ ಬೆಂಗಳೂರು ಜನತೆಗೆ ಮತ್ತೆ ʼಶಾಕಿಂಗ್ ನ್ಯೂಸ್ʼ

ಬೆಂಗಳೂರು: ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆಯಾಗಿದ್ದು, ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಸಂಜೆಯಿಂದ ಬೆಂಗಳೂರಿನ ಅನೇಕ ಸ್ಥಳಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು ರಸ್ತೆಗಳಲ್ಲಿ ನೀರು ಹರಿದ ಪರಿಣಾಮ ವಾಹನ ಸವಾರರು ಪರದಾಡುವಂತಾಗಿದೆ. ಜಲಾವೃತಗೊಂಡ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

ಯಶವಂತಪುರ, ಯಲಹಂಕ, ಪೀಣ್ಯ, ಮೆಜೆಸ್ಟಿಕ್, ಮಲ್ಲೇಶ್ವರಂ ಮೈಸೂರು ರಸ್ತೆ, ಬ್ಯಾಟರಾಯನಪುರ, ವಿಜಯನಗರ ಮಾಗಡಿ ರೋಡ್, ಕೆಆರ್ ಸರ್ಕಲ್, ಆನಂದರಾವ್ ಸರ್ಕಲ್, ಶೇಷಾದ್ರಿಪುರಂ, ಮೇಖ್ರಿ ಸರ್ಕಲ್ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ.

ಭಾರಿ ಮಳೆಯಿಂದಾಗಿ ಹಲವೆಡೆ ಮರಗಳು ಧರೆಗುರುಳಿದ್ದು ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ. ಯಲಹಂಕ ರೈತರ ಸಂತೆ ಸಮೀಪ ಟ್ರಾನ್ಸ್ ಫಾರ್ಮರ್ ಮುರಿದುಬಿದ್ದಿದೆ ಮೆಜೆಸ್ಟಿಕ್ ಸುತ್ತಮುತ್ತ ಮಳೆಯಾಗುತ್ತಿದ್ದು ವಾಹನ ಸವಾರರು ಪರದಾಟ ನಡೆಸಿದ್ದಾರೆ. ಅಲ್ಲಲ್ಲಿ ಮರದ ಕೊಂಬೆಗಳು ಮುರಿದು ಬಿದ್ದಿವೆ.

ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಲೆನಾಡು ಭಾಗ, ಚಿಕ್ಕಮಗಳೂರು, ಚಿತ್ರದುರ್ಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...