alex Certify BREAKING: ಬೆಂಗಳೂರಲ್ಲಿ ಮಗುವಿನ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ಗುಂಡೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಂಗಳೂರಲ್ಲಿ ಮಗುವಿನ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ಗುಂಡೇಟು

ಬೆಂಗಳೂರು: ಬೆಂಗಳೂರಿನಲ್ಲಿ ಮಗುವಿನ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಫೈರಿಂಗ್ ಮಾಡಲಾಗಿದೆ. ಗುಂಡು ಹಾರಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಚೆನ್ನೈ ಮೂಲದ ದಿನೇಶ್ ಬಂಧಿತ ಆರೋಪಿ. ಬೆಂಗಳೂರಿನ ಶ್ರೀರಾಮಪುರ ಪೊಲೀಸರು ಫೈರಿಂಗ್ ಮಾಡಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಎರಡು ದಿನದ ಹಿಂದೆ 4 ವರ್ಷದ ಬಾಲೆಯನ್ನು ಅಪಹರಿಸಿ ಈತ ಅತ್ಯಾಚಾರ ಎಸಗಿದ್ದ. ಶ್ರೀರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು.

ಎರಡು ದಿನದ ಹಿಂದೆ ತಡ ರಾತ್ರಿ ಮಗುವನ್ನು ಕಿಡ್ನಾಪ್ ಮಾಡಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರಕ್ಕೆ ಒಳಗಾದ ಮಗುವಿನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಚೆನ್ನೈ ಮೂಲದ ದಿನೇಶ್ ನನ್ನು ಇವತ್ತು ಅರೆಸ್ಟ್ ಮಾಡಲು ಹೋಗಿದ್ದ ವೇಳೆ ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...