alex Certify ಮಾಸ್ಕ್ ಧರಿಸದ ಪೊಲೀಸರಿಗೆ ಶಾಕ್, 6 ಪೊಲೀಸರು ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಸ್ಕ್ ಧರಿಸದ ಪೊಲೀಸರಿಗೆ ಶಾಕ್, 6 ಪೊಲೀಸರು ಸಸ್ಪೆಂಡ್

ಬೆಂಗಳೂರಿನಲ್ಲಿ ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೀಗಿದ್ದರೂ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಇದೇ ವೇಳೆ ನಿಯಮ ಉಲ್ಲಂಘಿಸಿದ 6 ಪೊಲೀಸರನ್ನು ಅಮಾನತು ಮಾಡಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಕೆಲಸದ ವೇಳೆ ಮಾಸ್ಕ್ ಧರಿಸದೇ ನಿಯಮ ಪಾಲಿಸದ ಕಾರಣಕ್ಕೆ 6 ಪೊಲೀಸರನ್ನು ಅಮಾನತು ಮಾಡಲಾಗಿದೆ.

ಬೆಂಗಳೂರಿನಲ್ಲಿ ಟ್ರಾಫಿಕ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪೊಲೀಸರು ಮಾಸ್ಕ್ ಧರಿಸದೆ ಇರುವುದು ಕಂಡುಬಂದಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವುದನ್ನು ಗಮನಿಸಿದ ಹಿರಿಯ ಅಧಿಕಾರಿಗಳು ಅಮಾನತು ಮಾಡಿದ್ದಾರೆ. ಸಂಚಾರ ದಟ್ಟಣೆ ನಿಯಂತ್ರಿಸಲು ಈ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಈ ವೇಳೆ ಅವರು ನಿಯಮ ಉಲ್ಲಂಘಿಸಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...