alex Certify ಬೆಂಗಳೂರಿನಲ್ಲಿ ಬೆಳಗಿನ ಜಾವ ವಾಕಿಂಗ್ ಹೊರಟಿದ್ದ ಮಹಿಳೆ ಮುಂದೆ ಪ್ಯಾಂಟ್ ಬಿಚ್ಚಿ ಅಸಭ್ಯ ವರ್ತನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನಲ್ಲಿ ಬೆಳಗಿನ ಜಾವ ವಾಕಿಂಗ್ ಹೊರಟಿದ್ದ ಮಹಿಳೆ ಮುಂದೆ ಪ್ಯಾಂಟ್ ಬಿಚ್ಚಿ ಅಸಭ್ಯ ವರ್ತನೆ

ಬೆಂಗಳೂರು: ಒಂಟಿ ಮಹಿಳೆಯ ಎದುರು ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ದತ್ತು ಅಲಿಯಾಸ್ ಚೋಟು ಬಂಧಿತ ಆರೋಪಿ ಎಂದು ಹೇಳಲಾಗಿದೆ. ಜೆಸಿ ನಗರದ ಮೋದಿ ಗಾರ್ಡನ್ ಸಮೀಪ ವಾಕಿಂಗ್ ಹೊರಟಿದ್ದ ಒಂಟಿ ಮಹಿಳೆ ಬಳಿ ಬಂದ ಆರೋಪಿ ಅಸಭ್ಯವಾಗಿ ವರ್ತಿಸಿದ್ದಾನೆ. ಪ್ಯಾಂಟ್ ಬಿಚ್ಚಿದ ಆರೋಪಿ ಮಹಿಳೆಯನ್ನು ತಬ್ಬಿಕೊಂಡು ಅಸಭ್ಯವಾಗಿ ವರ್ತಿಸಿದ್ದು ಈ ವೇಳೆ ಆಕ್ರೋಶಗೊಂಡ ಮಹಿಳೆ ಚಪ್ಪಲಿಯಿಂದ ಹೊಡೆದಿದ್ದಾರೆ. ಆದರೂ ಆರೋಪಿ ಅನುಚಿತ ವರ್ತನೆ ಮುಂದುವರಿಸಿದಾಗ ಮಹಿಳೆ ಜೋರಾಗಿ ಕೂಗಾಡಿದ್ದಾರೆ.

ಅವರು ಕೂಗಾಡುತ್ತಿದ್ದಂತೆ ಆಕೆಯನ್ನು ತಳ್ಳಿ ಪರಾರಿಯಾಗಿದ್ದಾನೆ. ಜೆಸಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...