ಬೆಂಗಳೂರು ನಗರದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಈಗಾಗಲೇ ಮೂವರು ಪೊಲೀಸರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ 55 ವರ್ಷ ಮೇಲ್ಪಟ್ಟ ಪೊಲೀಸ್ ಸಿಬ್ಬಂದಿಗೆ ರಜೆ ನೀಡಲು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸೂಚನೆ ನೀಡಿದ್ದಾರೆ.
55 ವರ್ಷ ಮೇಲ್ಪಟ್ಟ ಅಧಿಕಾರಿ ಮತ್ತು ಸಿಬ್ಬಂದಿಗೆ ರಜೆ ನೀಡಿ ಮನೆಯಲ್ಲೇ ಇರುವಂತೆ ಸೂಚಿಸಿದ್ದಾರೆ. ಪೊಲೀಸ್ ಸಿಬ್ಬಂದಿಗೆ ಮೌಖಿಕ ಸೂಚನೆ ನೀಡಿರುವ ಆಯುಕ್ತರು, ಸಕ್ಕರೆ ಕಾಯಿಲೆ, ರಕ್ತದೊತ್ತಡದಿಂದ ಬಳಲುತ್ತಿರುವ ಸಿಬ್ಬಂದಿ ಮನೆಯಲ್ಲೇ ಇರಬೇಕು. ಅಂತಹ ಸಿಬ್ಬಂದಿಯನ್ನು ರಜೆ ಮೇಲೆ ಕಳುಹಿಸಬೇಕು ಎಂದು ತಿಳಿಸಿದ್ದಾರೆ.
ಯಾವುದೇ ಕಾರಣಕ್ಕೂ ಊರಿಗೆ ಹೋಗದಂತೆ ನೋಡಿಕೊಳ್ಳಬೇಕು. ಪೊಲೀಸ್ ಠಾಣೆಗಳಲ್ಲಿ ಸಿಬ್ಬಂದಿ ಕೊರತೆ ಉಂಟಾದರೆ ಹೋಂಗಾರ್ಡ್ಸ್ ಸಿಬ್ಬಂದಿಯನ್ನು ಬಳಸಿಕೊಳ್ಳುವ ಮೂಲಕ ಎಲ್ಲರ ಸುರಕ್ಷತೆಗೆ ಒತ್ತು ನೀಡಬೇಕೆಂದು ಹೇಳಿದ್ದಾರೆ.