
ಬೆಂಗಳೂರು: ನಗರ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ಅವರನ್ನು ನೇಮಿಸಲಾಗಿದೆ. ನಿರ್ಗಮಿತ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ವೈರ್ ಲೆಸ್ ಮೂಲಕ ನಗರದ ಪೊಲೀಸರಿಗೆ ಧನ್ಯವಾದ ಹೇಳಿದ್ದಾರೆ.
ಸಿಎಎ, ಎನ್.ಆರ್.ಸಿ. ಪ್ರತಿಭಟನೆ ಸಂದರ್ಭದಲ್ಲಿ ಸಾಕಷ್ಟು ಶ್ರಮ ವಹಿಸಿದ್ದೀರಿ. ಕೊರೋನಾ ಸಂದರ್ಭದಲ್ಲಿ ಹಗಲು, ರಾತ್ರಿ ಕರ್ತವ್ಯ ನಿರ್ವಹಿಸಿದ್ದು, ಕೋವಿಡ್ ನಿಯಂತ್ರಣಕ್ಕಾಗಿ ಹೆಚ್ಚಿನ ಶ್ರಮ ಹಾಕಿದ್ದೀರಿ. ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸಾಕಷ್ಟು ಪ್ರಯತ್ನಪಟ್ಟಿದ್ದೀರಿ. ದಕ್ಷವಾಗಿ ಕೆಲಸ ಮಾಡಿದ್ದೀರಿ ಎಂದು ಹೇಳಿದ್ದಾರೆ.
ಕೊರೊನಾ ಸೋಂಕು ತಗುಲಿದ ಸಿಬ್ಬಂದಿ ಆದಷ್ಟು ಬೇಗ ಗುಣಮುಖರಾಗಿ ಬನ್ನಿ. ನಿಮ್ಮ ಮಕ್ಕಳು ಮತ್ತು ಕುಟುಂಬದವರಿಗೆ ಆದ್ಯತೆ ಕೊಡಿ. ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಸಂದೇಶ ನೀಡಿದ್ದಾರೆ.
ಬೆಂಗಳೂರು ಪೊಲೀಸ್ ಆಯುಕ್ತರಾಗಿ ಕೆಲಸ ಮಾಡಿದ್ದು ತೃಪ್ತಿಕರವಾಗಿದೆ. ನಿಮ್ಮೆಲ್ಲರ ಸಹಕಾರಕ್ಕೆ ಧನ್ಯವಾದ ಹೇಳುತ್ತೇನೆ ಎಂದು ತಿಳಿಸಿದ್ದಾರೆ.