
ಬೀದರ್ ಜಿಲ್ಲೆಯಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 9 ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಮೂವರು ಮಹಿಳೆಯರು, ಆರು ಮಂದಿ ಪುರುಷರು ಸೇರಿದಂತೆ 9 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 36 ಕ್ಕೆ ಏರಿಕೆಯಾಗಿದೆ.
ಬೀದರ್ ನಲ್ಲಿ 3, ಭಾಲ್ಕಿ 2, ಬಸವಕಲ್ಯಾಣ 3, ಹುಮ್ನಾಬಾದ್ ಒಬ್ಬರು ಮೃತಪಟ್ಟಿದ್ದಾರೆ. ಬೀದರ್ ಜಿಲ್ಲೆಯಲ್ಲಿ 29 ಜನರಿಗೆ ಕೊರೊನಾ ಸೋಂಕು ತಗುಲಿರುವುದು ಧೃಢಪಟ್ಟಿದೆ. ಜಿಲ್ಲಾಡಳಿತದಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ.
ಬೀದರ್, ಬಸವಕಲ್ಯಾಣ, ಭಾಲ್ಕಿ, ಚಿಟಗುಪ್ಪ, ಔರಾದ್ ತಾಲೂಕಿನ ಜವರಿಗೆ ಕೊರೊನಾ ಸೋಂಕು ತಗುಲಿರುವುದು ಧೃಢಪಟ್ಟಿದೆ ಮಹಾರಾಷ್ಟ್ರದಿಂದ ವಾಪಾಸಾದ ಹಲವರಿಗೆ ಸೋಂಕು ತಗುಲಿದೆ. ಕಂಟೇನ್ಮೆಂಟ್ ಪ್ರದೇಶದ ಹಲವರಿಗೆ ಸೋಂಕು ತಗುಲಿದೆ.