ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಪೊಲೀಸರ ಜೊತೆ ಕಾರ್ಯಾಚರಣೆ ನಡೆಸಿ 1200 ಕ್ವಿಂಟಾಲ್ ಪಡಿತರ ಅಕ್ಕಿ ಜಪ್ತಿ ಮಾಡಿದ್ದಾರೆ.
ಗುರುಮಿಟ್ಕಲ್ ನಿಂದ 4 ಲಾರಿಗಳಲ್ಲಿ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು ಗುಜರಾತ್ ಗೆ ಸಾಗಿಸಲಾಗುತ್ತಿತ್ತು. ಒಟ್ಟು 36 ಲಕ್ಷ ರೂಪಾಯಿ ಮೌಲ್ಯದ ಅಕ್ಕಿ ವಶಕ್ಕೆ ಪಡೆಯಲಾಗಿದೆ.
4 ಲಾರಿಗಳ ಚಾಲಕರು, ನಿರ್ವಾಹಕರು ಮತ್ತು ಅಕ್ಕಿ ಲೋಡ್ ಮಾಡಲು ಸಹಕರಿಸಿದವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, 1.16 ಕೋಟಿ ರೂಪಾಯಿ ಮೌಲ್ಯದ ಲಾರಿ, ಅಕ್ಕಿ ಜಪ್ತಿ ಮಾಡಲಾಗಿದ್ದು ಪೊಲೀಸ್ ವಶಕ್ಕೆ ಒಪ್ಪಿಸಲಾಗಿದೆ.
ಆಹಾರ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಪೊಲೀಸ್ ಇಲಾಖೆ ಸಿಬ್ಬಂದಿ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಲಾಗಿದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.