ರಾಜ್ಯದಲ್ಲಿ ಕೊರೊನಾ ಹಾವಳಿ ಮಿತಿ ಮೀರಿರುವ ಹಿನ್ನಲೆಯಲ್ಲಿ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ 14 ದಿನಗಳ ಕಾಲ ಕಠಿಣ ನಿರ್ಬಂಧಗಳನ್ನು ಜಾರಿಗೆ ತರುತ್ತಿದೆ. ಈ ನಿಯಮ ನಾಳೆ ರಾತ್ರಿಯಿಂದಲೇ ಜಾರಿಗೆ ಬರುತ್ತಿದೆ.
ಅಲ್ಲದೇ ಇನ್ನು ಆರು ತಿಂಗಳ ಕಾಲ ಎಲ್ಲ ಚುನಾವಣೆಗಳನ್ನು ಮುಂದೂಡಿಕೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡಬಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತುಗಳನ್ನು ಖರೀದಿ ಮಾಡಲು ಅವಕಾಶವಿರುತ್ತದೆ. ಆ ಬಳಿಕ ಅನಿವಾರ್ಯತೆಯಿದ್ದವರು ಮಾತ್ರ ಮನೆಯಿಂದ ಹೊರ ಬರಬೇಕಾಗುತ್ತದೆ. ಅನಗತ್ಯವಾಗಿ ಮನೆಯಿಂದ ಹೊರ ಬಂದರೆ ಪೊಲೀಸರ ಲಾಠಿ ಏಟು ಬೀಳಲಿದೆ.