ಇಂದು ಬೆಳ್ಳಂಬೆಳಿಗ್ಗೆಯೇ ಸಿಬಿಐ ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಸದಾಶಿವನಗರದಲ್ಲಿರುವ ಡಿಕೆಶಿ ನಿವಾಸಕ್ಕೆ ಸಿಬಿಐ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಡಿ.ಕೆ. ಶಿವಕುಮಾರ್ ಈ ಹಿಂದೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ವಿಚಾರಣೆಗೊಳಪಟ್ಟು ಬಂಧನಕ್ಕೊಳಗಾಗಿದ್ದರು. ಬಳಿಕ ಡಿಕೆಶಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.
ಇದೀಗ ಸಿಬಿಐ ಅಧಿಕಾರಿಗಳು ಡಿಕೆಶಿ ನಿವಾಸದ ಮೇಲೆ ಬೆಳಿಗ್ಗೆ 6 ಗಂಟೆ ಸುಮಾರಿಗೆ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದ್ದು, ಡಿಕೆಶಿ ಅವರ ಸದಾಶಿವನಗರ ನಿವಾಸದ ಜೊತೆಗೆ ಅವರಿಗೆ ಸಂಬಂಧಪಟ್ಟ ಇತರೆ ಕೆಲವು ಸ್ಥಳಗಳ ಮೇಲೂ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ.