ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಬೆನ್ನಲ್ಲೇ ಸೋಂಕು ವ್ಯಾಪಕವಾಗಿರುವ 8 ನಗರಗಳಲ್ಲಿ ರಾಜ್ಯ ಸರ್ಕಾರ ನಾಳೆಯಿಂದ ನೈಟ್ ಕರ್ಫ್ಯೂ ವಿಧಿಸಿದೆ. ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ಈ ಕರ್ಫ್ಯೂ ಇರಲಿದ್ದು, ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಸೇವೆಗಳು ಬಂದ್ ಆಗಿರಲಿದೆ.
ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸುವವರಿಗೆ ನೈಟ್ ಕರ್ಫ್ಯೂವಿನಿಂದ ವಿನಾಯಿತಿ ನೀಡಲಾಗಿದ್ದು, ಆದರೆ ಅವರುಗಳು ವಿಚಾರಣೆ ಸಂದರ್ಭದಲ್ಲಿ ತಮ್ಮ ಗುರುತಿನ ಚೀಟಿ ತೋರಿಸಬೇಕಾಗುತ್ತದೆ.
ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಕೇವಲ 8 ನಗರ ಪ್ರದೇಶಗಳಿಗಷ್ಟೇ ನೈಟ್ ಕರ್ಫ್ಯೂ ಮಾರ್ಗ ಸೂಚಿ ಅನ್ವಯವಾಗಲಿದೆ.
ಸರಕು ಸಾಗಣೆ ವಾಹನಗಳಿಗೆ ವಿನಾಯಿತಿ ನೀಡಲಾಗಿದ್ದು, ನೈಟ್ ಕರ್ಫ್ಯೂ ಏಪ್ರಿಲ್ 20 ರ ವರೆಗೆ ಜಾರಿಯಲ್ಲಿರಲಿದೆ.
ಬಸ್, ರೈಲು ಹಾಗೂ ವಿಮಾನದ ಮೂಲಕ ಆಗಮಿಸುವವರು ತಮ್ಮ ಸ್ಥಳಗಳಿಗೆ ತಲುಪಲು ಅವಕಾಶ ಸಿಗಲಿದ್ದು, ಈ ಸಂದರ್ಭದಲ್ಲಿ ಟಿಕೆಟ್ ತೋರಿಸುವುದು ಕಡ್ಡಾಯವಾಗಿದೆ.
ಬೆಂಗಳೂರು ನಗರ, ಮೈಸೂರು ನಗರ, ಮಂಗಳೂರು, ಕಲಬುರ್ಗಿ, ಬೀದರ್, ತುಮಕೂರು, ಉಡುಪಿ, ಮಣಿಪಾಲದಲ್ಲಿ ನೈಟ್ ಕೊರೊನಾ ಕರ್ಫ್ಯೂ ಜಾರಿಯಲ್ಲಿರುತ್ತದೆ.