alex Certify BIG BREAKING: ಪದವಿ ಪರೀಕ್ಷೆ ಕುರಿತಂತೆ ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ – ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಉಳಿದೆಲ್ಲರೂ ಪರೀಕ್ಷೆಯಿಲ್ಲದೆ ಪಾಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಪದವಿ ಪರೀಕ್ಷೆ ಕುರಿತಂತೆ ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ – ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಉಳಿದೆಲ್ಲರೂ ಪರೀಕ್ಷೆಯಿಲ್ಲದೆ ಪಾಸ್

ಕೊರೊನಾ ಅಬ್ಬರಿಸುತ್ತಿರುವ ಹಿನ್ನಲೆಯಲ್ಲಿ ಪದವಿ ಪರೀಕ್ಷೆಗಳ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. 2019-20ನೇ ಸಾಲಿನಲ್ಲಿ ಎಂಜಿನಿಯರಿಂಗ್ ಸೇರಿ ಇತರ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಧ್ಯಂತರ ಸೆಮಿಸ್ಟರ್ (intermediate Semester) ವಿದ್ಯಾರ್ಥಿಗಳನ್ನು ಅಂತಿಮ ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ ಉತ್ತೀರ್ಣಗೊಳಿಸುವುದಾಗಿ ಪ್ರಕಟಿಸಿದೆ.

ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಸೆಮಿಸ್ಟರ್‌ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಯುಜಿಸಿ ಮಾರ್ಗಸೂಚಿ ಅನ್ವಯ ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ ನಡೆಸಲೂ ಸಹ ತೀರ್ಮಾನಿಸಲಾಗಿದ್ದು, ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯವನ್ನು ಗಣನೆಗೆ ತೆಗೆದುಕೊಂಡು ಶಿಕ್ಷಣ ತಜ್ಞರು, ವಿವಿಗಳ ಕುಲಪತಿಗಳ ಜತೆ ನಿರಂತರ ಸಮಾಲೋಚನೆ ನಡೆಸಿದ ನಂತರ ಈ ಮಹತ್ವದ ನಿರ್ಧಾರ ಕೈಕೊಳ್ಳಲಾಗಿದೆ.

ಈ ನಿರ್ಧಾರ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ (2019-20) ಮಾತ್ರ ಸೀಮಿತವಾಗಿರುತ್ತದೆ. ಸರಕಾರದ ಈ ನಿರ್ಧಾರಕ್ಕೆ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ವಜೂಭಾಯಿವಾಲ ಅವರು ಹಸಿರು ನಿಶಾನೆ ತೋರಿಸಿದ್ದಾರೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.

ಕೊರೊನಾ ಈಗ ಇಡೀ ಶೈಕ್ಷಣಿಕ ವ್ಯವಸ್ಥೆಯನ್ನು ಬುಡಮೇಲು ಮಾಡಿದೆ. ಸಕಾಲಕ್ಕೆ ತರಗತಿಗಳು ನಡೆಸಲು ಸಾಧ್ಯವಾಗಲಿಲ್ಲ. ಲಾಕ್‌ ಡೌನ್‌ ಸಂದರ್ಭದಲ್ಲಿ ಆನ್ ‌ಲೈನ್‌ ಮೂಲಕ ಶಿಕ್ಷಣ ನೀಡಿದ್ದು, ಒಳ್ಳೆಯ ಪ್ರತಿಕ್ರಿಯೆ ಕೂಡ ಬಂದಿದೆ. ಸಾಧ್ಯವಾದಷ್ಟು ಎಲ್ಲರನ್ನೂ ತಲುಪಲು ಪ್ರಾಮಾಣಿಕ ಪ್ರಯತ್ನ ನಡೆಸಲಾಯಿತಾದರೂ ಕೊರೊನಾ‌ ವ್ಯಾಪಕವಾಗಿ ಹಬ್ಬುತ್ತಿರುವ ಕಾರಣಕ್ಕೆ ಅವೆಲ್ಲವನ್ನೂ ಕೈಬಿಟ್ಟು ಮಧ್ಯಂತರ ಸೆಮಿಸ್ಟರ್‌/ವರ್ಷದ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲು ನಿರ್ಧರಿಸಲಾಯಿತು. ಅಂತಿಮ ವರ್ಷ/ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ, ಸೆಪ್ಟೆಂಬರ್‌ ತಿಂಗಳ ಅಂತ್ಯದೊಳಗೆ ಪರೀಕ್ಷೆಗಳನ್ನು (ಆನ್‌ಲೈನ್‌/ಆಪ್‌ಲೈನ್‌) ನಡೆಸಲು ಆಯಾ ವಿಶ್ವವಿದ್ಯಾಲಯಗಳಿಗೇ ಸೂಚಿಸಲಾಗಿದೆ ಎಂದು ಸಚಿವರು ವಿವರಿಸಿದರು.

ತೇರ್ಗಡೆ ಮಾಡುವ ಕುರಿತಂತೆಯೂ ಮಾರ್ಗಸೂಚಿ ರೂಪಿಸಲಾಗಿದ್ದು, ಮಧ್ಯಂತರ ಸೆಮಿಸ್ಟರ್‌/ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಆಂತರಿಕ ಮೌಲ್ಯಮಾಪನ (internal marks) ಮತ್ತು ಹಿಂದಿನ ಸೆಮಿಸ್ಟರ್‌/ವರ್ಷದ ಅಂಕಗಳ (50:50) ಸಮಗ್ರ ಮೌಲ್ಯಮಾಪನದ (comprehensive evaluation) ಆಧಾರದ ಮೇಲೆ ತೇರ್ಗಡೆ ಮಾಡಲಾಗುತ್ತದೆ. ಹಿಂದಿನ ವರ್ಷದ ಅಂಕಗಳು ಇಲ್ಲದ ವಿದ್ಯಾರ್ಥಿಗಳನ್ನು (ಉದಾ: ಮೊದಲ ಸೆಮಿಸ್ಟರ್‌ ವಿದ್ಯಾರ್ಥಿಗಳು) ಪೂರ್ಣ ಅಂತರಿಕ ಮೌಲ್ಯಮಾಪನದ ಮೂಲಕವೇ ಉತ್ತೀರ್ಣಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು. ಇದರ ನಡುವೆಯೂ ತಮ್ಮ ಅಂಕಗಳನ್ನು ಉತ್ತಮಗೊಳಿಸಿಕೊಳ್ಳಬೇಕೆನ್ನುವ ವಿದ್ಯಾರ್ಥಿಗಳು ಸೆಮಿಸ್ಟರ್‌ನಲ್ಲಿ ಪ್ರತ್ಯೇಕವಾಗಿ ಪರೀಕ್ಷೆಗಳನ್ನು ಬರೆಯಲು ಅವಕಾಶ ನೀಡಲಾಗುವುದು. ಬ್ಯಾಕ್ ‌ಲಾಗ್‌ ವಿಷಯಗಳ ಕ್ಯಾರಿ ಓವರ್‌ಗೂ ಅವಕಾಶ ಇರುತ್ತದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು. ಈ ಕುರಿತು ಏನೇ ಅನುಮಾನಗಳು ಇದ್ದರೂ ಹೆಲ್ಪ್ ಲೈನ್ ದೂರವಾಣಿ ಸಂಖ್ಯೆ- 080 22341394 ಗೆ ಕರೆ ಮಾಡಿ ಪರಿಹರಿಸಿಕೊಳ್ಳಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...