ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಎಫ್ಐಆರ್ ದಾಖಲಿಸಲು ತುಮಕೂರಿನ ಕ್ಯಾತ್ಸಂದ್ರ ಪೊಲೀಸರಿಗೆ ಕೋರ್ಟ್ ನಿರ್ದೇಶನ ನೀಡಿದೆ.
ರೈತರನ್ನು ಉಗ್ರರು ಎಂದು ಬಾಲಿವುಡ್ ನಟಿ ಕಂಗನಾ ರಣಾವತ್ ಕರೆದಿದ್ದರು. ಸೆಪ್ಟೆಂಬರ್ 25ರಂದು ಹೈಕೋರ್ಟ್ ವಕೀಲ ರಮೇಶ್ ನಾಯಕ್ ಅವರು, ರೈತರನ್ನು ನಿಂದಿಸಿದ್ದಾರೆ ಎಂದು ಆರೋಪಿಸಿ ಕೋರ್ಟ್ ಗೆ ದೂರು ನೀಡಿದ್ದರು.
ತುಮಕೂರು ಜೆ.ಎಂ.ಎಫ್.ಸಿ. ಕೋರ್ಟ್ ಗೆ ಅವರು ದೂರು ನೀಡಿದ್ದರು. ಈ ಕುರಿತಾಗಿ ಎಫ್ಐಆರ್ ದಾಖಲಿಸುವಂತೆ ಪೊಲೀಸರಿಗೆ ಕೋರ್ಟ್ ನಿರ್ದೇಶನ ನೀಡಿದೆ ಎಂದು ಹೇಳಲಾಗಿದೆ.